ಭಳಿ ಭಳಿರೆ ನಾರಸಿಂಹ ಮಹಾಸಿಂಹ |
ಮಲಮಲಾ ಮಲತವರ ವೈರಿ ಉರಿಮಾರಿ||
ನಗನಗಾ ನಗನಗಗಳಲ್ಲಾಡೆ ಚತುರ್ದಶ |
ಜಗಜಗ ಜಗವೆಲ್ಲ ಕಂಪಿಸಿ ಕಂಬನಾಗೆ ||
ಹಗೆ ಹಗೆ ಹಗೆ ಹಗೆ ಬಲವ ದೆಶೆಗೆಡಿಸಿ ರೋಷಗಿಡಿ |
ಉಗು ಉಗು ಉಗುಳುತ್ತ ಬಂದ ನರಸಿಂಹ || 1 ||
ಬಿಗಿ ಬಿಗಿ ಬಿಗಿದು ಹುಬ್ಬುಗಂಟನೆ ಹಾಕಿ |
ಹೊಗೆ ಹೊಗೆ ಹೊಗೆ ಸುತ್ತಿ ಸರ್ವರಂಜೆ ||
ನೆಗ ನೆಗ ನೆಗ ನೆಗದು ಕುಪ್ಪಳಿಸಿ ಅಸುರನ್ನ |
ಮಗು ಮಗು ಮಗು ಮಗು ಬೇಡಿಕೊಂಡ ನರಸಿಂಹ || 2 ||
ಉಗು ಉಗು ಉಗು ಉಗರಿಂದ ಕ್ರೂರನ್ನ ಹೇರೊಡಲ |
ಬಗ ಬಗ ಬಗ ಬಗದು ರಕುತವನ್ನು |
ಉಗಿ ಉಗೀ ಉಗೀ ಉಗಿದು ಚಲ್ಲಿ ಕೊರಳಿಗೆ ಕರುಳ |
ತೆಗೆ ತೆಗೆ ತೆಗೆ ತೆಗೆದು ಇಟ್ಟ ನರಸಿಂಹ || 3 ||
ಯುಗ ಯುಗ ಯುಗ ಯುಗದೊಳಗೆ ಪ್ರಣತಾರ್ತಿ ಹರನೆಂದು |
ಝಗ ಝಗಾ ಝಗಝಗಿಪ ಮಕುಟ ತೂಗೆ |
ನಗು ನಗು ನಗು ನಗುತ ಸುರರು ಗಗನದಿ ನೆರೆದು |
ಮಿಗಿ ಮಿಗಿ ಮಿಗಿ ಮಿಗಿಲೆನೆ ನಾರಸಿಂಹ || 4 ||
ಒಂದೊಂದೊಂದೊಂದು ಮುನಿಗಳಿಗೊಲಿದು |
ಅಂದಂದಂದಂದದೀಗಾಯತ ವೊಲಿದು |
ಅಂದಂದಂದವ ಕಾವ ಚೊಳಂಗಿರಿ |
ಮಂದಿರನೆ ವಿಜಯವಿಠ್ಠಲ ನಾರಸಿಂಹ||5||
Astrology
Bhagavad Gita
Bhagavatam
Bharat Matha
Devi
Devi Mahatmyam
Ganapathy
Garuda Puranam
Glory of Venkatesha
Hanuman
Kathopanishad
Mahabharatam
Mantra Shastra
Mystique
Practical Wisdom
Purana Stories
Radhe Radhe
Ramayana
Rare Topics
Rigveda Explained
Rituals
Sages and Saints
Shiva
Spiritual books
Sri Suktam
Story of Sri Yantra
Temples
Vedas
Vishnu Sahasranama
Yoga Vasishta