ನೀ ಸಿಗದೇ ಬಾಳೊಂದು

ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ
ನಾ ತಾಳಲಾರೆ ಈ ವಿರಹ ಕೃಷ್ಣ
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ
ಕಮಲವಿಲ್ಲದ ಕೆರೆ ನನ್ನ ಬಾಳು
ಚಂದ್ರ ಇಲ್ಲದಾ ರಾತ್ರಿ ಬೀಳು
ನೀ ಸಿಗದೇ ಉರಿ ಉರಿ ಕಳೆದೆ ಇರುಳ
ಮಾತೆಲ್ಲ ಬಿಗಿದಿದೆ ದುಃಖ ಕೊರಳ
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ
ಅನ್ನ ಸೇರದು ನಿದ್ದೆ ಬಂದುದೆಂದು
ಕುದಿವೆ ಒಂದೇ ಸಮ ಕೃಷ್ಣ ಎಂದು
ಯಾರು ಅರಿವರು ಹೇಳು ನನ್ನ ನೋವ
ತಲ್ಲಣಿಸಿ ಕೂಗುತಿದೆ ದಾಸಿ ಜೀವ
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ
ಒಳಗಿರುವ ಗಿರಿಧರನೇ ಹೊರಗೆ ಬಾರೋ
ಕಣ್ಣೆದುರು ನಿಂತು ಆ ರೂಪ ತೋರೋ
ಜನುಮ ಜನುಮದಾ ರಾಗ ನನ್ನ ಪ್ರೀತಿ ಕೃಷ್ಣ ಕೃಷ್ಣ ಕೃಷ್ಣಾ
ಕೃಷ್ಣ
ಜನುಮ ಜನುಮದಾ ರಾಗ ನನ್ನ ಪ್ರೀತಿ
ನಿನ್ನೊಳಗೆ ಹರಿವುದೇ ಅದರಾ ರೀತಿ
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ
ನಾ ತಾಳಲಾರೆ ಈ ವಿರಹ ಕೃಷ್ಣ
ನೀ ಸಿಗದೇ ಬಾಳೊಂದು ಬಾಳೇ ಕೃಷ್ಣ ಕೃಷ್ಣ ಕೃಷ್ಣ

 

Nee Sigade Balondu Baale Krishna Kannada Song

 

Copyright © 2024 | Vedadhara | All Rights Reserved. | Designed & Developed by Claps and Whistles
| | | | |